ಹೈನುಗಾರಿಕೆ ಮತ್ತು ಇತರೆ ವ್ಯಾಪಾರ ವಹಿವಾಟನ್ನು ಉತ್ತೇಜಿಸಲು ಸರ್ಕಾರದಿಂದ ರೂ. 4 ಲಕ್ಷದ ವರೆಗೆ ಸಹಾಯಧನ (Government Subsidy) ನೀಡುತ್ತಿದ್ದು, ಅರ್ಹ ಫಲಾನುಭವಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ ಸರ್ಕಾರಿ ಯೋಜನೆಯ ಲಾಭ ಪಡೆದುಕೊಳ್ಳಬಹುದು.
ನೀವು ಕೂಡ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸಬೇಕೆ..? ಎಷ್ಟು ಸಹಾಯಧನ ದೊರೆಯಲಿದೆ? ಹೇಗೆ ಅರ್ಜಿ ಸಲ್ಲಿಸುವುದು ಮುಂತಾದ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ ಓದಿರಿ.
Government Subsidy:
- ಯೋಜನೆ: ಉದ್ಯಮಶೀಲತಾ ಅಭಿವೃದ್ಧಿ ಯೋಜನೆ
- ಸಹಾಯಧನ: ಗರಿಷ್ಠ ರೂ. 4 ಲಕ್ಷದ ವರೆಗೆ
- ವಯೋಮಿತಿ: 18 ರಿಂದ 56 ವರ್ಷ
- ವಿಭಾಗ: ಸರ್ಕಾರಿ ಯೋಜನೆಗಳು
ಉದ್ಯಮಶೀಲತಾ ಅಭಿವೃದ್ಧಿ ಯೋಜನೆ:
ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯ ಅಡಿಯಲ್ಲಿ ಹೈನುಗಾರಿಕೆ ಸೇರಿದಂತೆ ವಿವಿಧ ವ್ಯಾಪಾರ ವಹಿವಾಟು ಆರಂಭಿಸಲು ಇಚ್ಛಿಸುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿಯಲ್ಲಿ 4 ಲಕ್ಷದ ವರೆಗೆ ಸಹಾಯಧನ ದೊರೆಯಲಿದೆ.
2025-2026 ನೇ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವತಿಯಿಂದ 2025-ಪರಿಶಿಷ್ಟ ಜಾತಿಯವರ ಮತ್ತು ಪರಿಶಿಷ್ಟ ಪಂಗಡಗಳ ಆರ್ಥಿಕ ಅಭಿವೃದ್ಧಿಗಾಗಿ ಕಲ್ಯಾಣ ಯೋಜನೆಗಳ ಅಡಿಯಲ್ಲಿ ಉದ್ಯಮಶೀಲತಾ ಅಭಿವೃದ್ದಿ ಯೋಜನೆ (ಐಎಸ್‌ಬಿ) ಯ ಅಡಿಯಲ್ಲಿ ಬ್ಯಾಂಕ್‌ಗಳ ಸಹಯೋಗದೊಂದಿಗೆ ಹೈನುಗಾರಿಕೆ, ಸ್ವಾವಲಂಬಿ ಸಾರಥಿ ಮತ್ತು ಇತರೆ ಯೋಜನೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸಹಾಯಧನ ಏಷ್ಟು ನೀಡುತ್ತಾರೆ..?
- ಹೈನುಗಾರಿಕೆ: ಹೈನುಗಾರಿಕೆ ಉದ್ಯೋಮ ಶುರು ಮಾಡಲು ಎರಡು ಎಮ್ಮೆ ಅಥವಾ ಹಸು ಸಾಕಾಣಿಕೆಗೆ ಘಟಕ ವೆಚ್ಚದ ಶೇ.50 ರಷ್ಟು ಅಥವಾ ಗರಿಷ್ಟ ರೂ. 1.25 ಲಕ್ಷಗಳ ಸಹಾಯಧನವನ್ನು ಸರ್ಕಾರವು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯಡಿ ಬರುವ ವಿವಿಧ ನಿಗಮಗಳ ಮೂಲಕ ನೀಡಲಿದೆ.
- ಸ್ವಾವಲಂಬಿ ಸಾರಥಿ: ಸರಕು ವಾಹನ ಅಥವಾ ಟ್ಯಾಕ್ಸಿ (ಹಳದಿ ಬೋರ್ಡ್) ವಾಹನ ಖರೀದಿಸಲು ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷಗಳ ಸಹಾಯಧನ ನೀಡುತ್ತಾರೆ.
- ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ಮೊಬೈಲ್ ಕಿಚನ್: ಫುಡ್ ಕಾರ್ಟ್ ವಾಹನಗಳ ಉದ್ದೇಶದಡಿ ಘಟಕ ವೆಚ್ಚದ ಶೇ.75 ರಷ್ಟು ಅಥವಾ ಗರಿಷ್ಟ ರೂ. 4 ಲಕ್ಷಗಳ ಸಹಾಯಧನ.
- ಇತರೆ ಉದ್ದೇಶ: ವ್ಯಾಪಾರ ಮತ್ತು ಇತರೆ ಉದ್ದೇಶಗಳಿಗಾಗಿ ಘಟಕದ ವೆಚ್ಚದ ಶೇ. 70 ರಷ್ಟು ಅಥವಾ ಗರಿಷ್ಟ ರೂ. 2 ಲಕ್ಷ ಸಹಾಯಧನ
ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು?
ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಈ ಕೆಳಕಂಡ ನಿಗಮಗಳ ವ್ಯಾಪ್ತಿಯಲ್ಲಿರುವ ಸಮುದಾಯದ ಅಭ್ಯರ್ಥಿಗಳು ಆನ್‌ಲೈನ್ ಅರ್ಜಿ ಸಲ್ಲಿಸಬಹುದು.
- ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ
- ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ
- ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ
- ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗದು
- ಕರ್ನಾಟಕ ತಾಂಡ ಅಭಿವೃದ್ಧಿ ನಿಗಮ
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮ
- ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ
- ಕರ್ನಾಟಕ ಮೇದಾರ ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ
ಅರ್ಹತೆಯ ಮಾನದಂಡಗಳು:
- ಅರ್ಜಿದಾರ ಕರ್ನಾಟಕದ ನಿವಾಸಿಯಾಗಿರಬೇಕು
- ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಸಮುದಾಯಕ್ಕೆ ಸೇರಿದವರಾಗಿರಬೇಕು
- ವಯಸ್ಸು ಕನಿಷ್ಠ 21 ರಿಂದ ಗರಿಷ್ಠ 56 ವರ್ಷ ಮೀರಿರಬಾರದು
- ಅರ್ಜಿದಾರರ ಕುಟುಂಬದ ಸದಸ್ಯರು ಸರ್ಕಾರಿ, ಅರೆ ಸರ್ಕಾರಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರಬಾರದು
- ಅರ್ಜಿದಾರರ ಅಥವಾ ಅವರ ಕುಟುಂಬದವರು ಈ ಹಿಂದೆ ನಿಗಮದಿಂದ ಯಾವುದೇ ಸೌಲಭ್ಯ ಪಡೆದಿರಬಾರದು
- ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಭಾಗಕ್ಕೆ ರೂ 1.5 ಲಕ್ಷ ಮತ್ತು ನಗರ ಪ್ರದೇಶದವರಿಗೆ ರೂ. 2 ಲಕ್ಷ ಮೀರಿರಬಾರದು
- ವಿಕಲಚೇತನರಾಗಿದ್ದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು
ಅಗತ್ಯ ದಾಖಲೆಗಳು:
- ಅರ್ಜಿದಾರರ ಆಧಾರ್ ಕಾರ್ಡ್
- ಅರ್ಜಿದಾರರ ಆಹಾರ ಪಡಿತರ ಚೀಟಿ
- ಅರ್ಜಿದಾರರ ಚುನಾವಣಾ ಗುರುತಿನ ಚೀಟಿ
- ಸಕ್ಷಮ ಪ್ರಾಧಿಕಾರದಿಂದ ನೀಡಲಾದ ಜಾತಿ ಮತ್ತು ಆದಾಯ ಪ್ರಮಾಣಪತ್ರ
- ಯೋಜನಾ ವರದಿ / ದರಪಟ್ಟಿ
- ಈ ಹಿಂದೆ ನಿಗಮದಿಂದ ಯಾವುದೇ ಯೋಜನೆಯಡಿಲ್ಲಿ ಸೌಲಭ್ಯ ಪಡೆದಿಲ್ಲವೆಂದು ಅರ್ಜಿದಾರರ ಸ್ವಯಂ ಘೋಷಣೆ
- ಅರ್ಜಿದಾರರ ಇತ್ತೀಚಿನ ಭಾವಚಿತ್ರ
- ವಿಕಲಚೇತನರಾಗಿದ್ದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿಗಳಿಂದ ದೃಢೀಕರಿಸಲ್ಪಟ್ಟ ಪ್ರಮಾಣ ಪತ್ರ ಸಲ್ಲಿಸುವುದು
Government Subsidy For SC/ST ಪ್ರಮುಖ ದಿನಾಂಕಗಳು:
- ಸಮಾಜ ಕಲ್ಯಾಣ ಇಲಾಖೆಯ ಅರ್ಜಿ ಆರಂಭ: 07-08-2025
- ಸಮಾಜ ಕಲ್ಯಾಣ ಇಲಾಖೆ – ಅರ್ಜಿ ಸಲ್ಲಿಕೆ ಕೊನೆ ದಿನಾಂಕ: 10-09-2025
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಅರ್ಜಿ ಆರಂಭ: 18-08-2025
- ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ – ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 17-09-2025
ಈ ಯೋಜನೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಈ ಮೇಲಿನ ನಿಗಮದ ವ್ಯಾಪ್ತಿಯ ಅರ್ಹ ಅಭ್ಯರ್ಥಿಗಳು ಇಲಾಖೆ ನಿಗದಿ ಪಡಿಸಿರುವ ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಸರ್ಕಾರದ ಅಧಿಕೃತ ಸೇವಾ ಸಿಂಧು ಪೊರ್ಟಲ್ sevasindhu.karnataka.gov.in ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು ಅಥವಾ ‘ಗ್ರಾಮ ಒನ್ʼ, ʼಬೆಂಗಳೂರು ಒನ್ʼ, ʼಕರ್ನಾಟಕ ಒನ್ʼ ಕೇಂದ್ರಗಳಲ್ಲಿಯೂ ಕೂಡ ಅರ್ಜಿ ಸಲ್ಲಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಅರ್ಜಿ ಸಲ್ಲಿಕೆ ಲಿಂಕ್‌ನ್ನು ಕೇಳಗೆ ನೀಡಲಾಗಿದೆ.
SevaSindhu Online Application Link 2025:
ಆನ್‌ಲೈನ್ ಅರ್ಜಿ ಸಲ್ಲಿಕೆ ಲಿಂಕ್: ಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್: sevasindhu.karnataka.gov.in
2023-24 ಮತ್ತು 2024-25 ಸಾಲಿನಲ್ಲಿ ಈ ಮೇಲಿನ ನಿಗಮದಡಿ ಆನ್‌ಲೈನ್ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ವಿಷೇಶ ಸೂಚನೆಗಳು:
- ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದಡಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೊರ್ಟಲ್ ಮೂಲಕವೇ ಸಲ್ಲಿಸುವುದು.
- ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು. ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ.
- ಫಲಾಪೇಕ್ಷಿಗಳು ‘ಗ್ರಾಮ ಒನ್ʼ, ʼಬೆಂಗಳೂರು ಒನ್ʼ, ʼಕರ್ನಾಟಕ ಒನ್ʼ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಸಹಾಯವಾಣಿ: ಹೆಚ್ಚಿನ ಮಾಹಿತಿಗಾಗಿ ನಿಗಮದ ಜಿಲ್ಲಾ ವ್ಯವಸ್ಥಾಪಕರುಗಳ ಕಛೇರಿ ಅಥವಾ ನಿಗಮಗಳ ವೆಬ್ ಸೈಟ್ ಅಥವಾ ಕಲ್ಯಾಣಮಿತ್ರ ಸಹಾಯವಾಣಿ ಸಂಖ್ಯೆ 9482-300-400 ಗೆ ಸಂಪರ್ಕಿಸಬಹುದು.
ಗೌರಿ ಗಣೇಶ ಹಬ್ಬಕ್ಕೆ ಗೃಹಲಕ್ಷ್ಮೀ ಯೋಜನೆಯ 2,000 ರೂ. ಹಣ ಬಿಡುಗಡೆ..!