ಎಲ್ಲರಿಗೂ ನಮಸ್ಕಾರ, ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್, ಜೂನ್ ತಿಂಗಳಿನ 2,000 ರೂ. ಹಣವನ್ನು ಗೌರಿ ಗಣೇಶ ಹಬ್ಬದ ಕೊಡುಗೆಯಾಗಿ ಬಿಡುಗಡೆ ಮಾಡಲು ಸರ್ಕಾರ ನಿರ್ಧರಿಸಿದ್ದು, ಗೃಹಲಕ್ಷ್ಮೀ ಹಣವು ಈಗಾಗಲೇ ಖಜಾನೆಗೆ ಜಮಾ ಆಗಿದ್ದು ಶೀಘ್ರದಲ್ಲೇ ಯಜಮಾನಿಯರ ಖಾತೆಗೆ ಸಂದಾಯವಾಗಲಿದೆ.
ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳನ್ನು ವರ ಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಅರ್ಹ ಫಲಾನುಭವಿಗಳ ಖಾತೆಗೆ ಜಮಾ ಆಗಿದ್ದು, ಜೂನ್ ಹಾಗೂ ಜುಲೈ ತಿಂಗಳಿನ ಹಣ ಬಿಡುಗಡೆ ಬಾಕಿ ಇದ್ದು, ಜೂನ್ ತಿಂಗಳಿನ 2,000 ರೂ. ಹಣವನ್ನು ಗಣೇಶ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
ಗೃಹಲಕ್ಷ್ಮಿ ಯೋಜನೆಯ ಹಣವು ರಾಜ್ಯ ಖಜಾನೆಯಿಂದ ಜಿಲ್ಲಾ ಖಜಾನೆಗಳಿಗೆ ಬಿಡುಗಡೆಯಾಗಿದ್ದು, ವಾರದೊಳಗೆ ಯಜಮಾನಿ ಮಹಿಳೆಯರ ಬ್ಯಾಂಕ್ ಖಾತೆಗೆ ಹಣ ಜಮೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಗಳು ತಿಳಿಸಿವೆ.
ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣವನ್ನು ವರ ಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಬಿಡುಗಡೆ ಮಾಡಲಾಗಿದೆ ಹಾಗೂ ಮತ್ತೊಂದು ಕಂತಿನ 2,000 ರೂ. ಹಣವನ್ನು ಗೌರಿ ಗಣೇಶ ಹಬ್ಬಕ್ಕೆ ಕೊಡುಗೆಯಾಗಿ ಬಿಡುಗಡೆಗೊಳಸಲು ತಯಾರಿ ನಡೆಯುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದ್ದಾರೆ.
Government Subsidy: ಹೈನುಗಾರಿಕೆ ಮತ್ತು ಇತರೆ ಯೋಜನೆಗಳಿಗಾಗಿ 4 ಲಕ್ಷ ರೂ. ಸಹಾಯಧನ